ಶಿಕ್ಷಣ ಇಲಾಖೆಯಿಂದ ‘ಶಿಕ್ಷಕ ಮಿತ್ರ’ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಶಿಕ್ಷಕರುಗಳು 17 ಸೇವೆಗಳನ್ನು ಪಡೆಯಬಹುದಾಗಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಶಿಕ್ಷಕ ಮಿತ್ರ ಅಪ್ಲಿಕೇಶನ್ ಮೂಲಕ ಸಲ್ಲಿಕೆಯಾಗುವ ಪ್ರಸ್ತಾವನೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಲಾಗಿದ್ದು, ಇಲಾಖೆ ವ್ಯಾಪ್ತಿಯಲ್ಲಿರುವ ಬೋಧಕ ಮತ್ತು ಬೋಧಕೇತರ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗಳು ಇದರ ಮೂಲಕವೇ ಕಡ್ಡಾಯವಾಗಿ ಸೇವೆಗಳನ್ನು ಪಡೆಯುವಂತೆ ತಿಳಿಸಲಾಗಿದೆ.
ಹೀಗಾಗಿ ಭೌತಿಕ ಪ್ರಸ್ತಾವನೆ ಸ್ವೀಕರಿಸದೆ ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸ್ವೀಕರಿಸುವಂತೆ ತಿಳಿಸಲಾಗಿದ್ದು, ಜೊತೆಗೆ ಇವುಗಳನ್ನು ಇತ್ಯರ್ಥಪಡಿಸಲು ಕಾಲಮಿತಿಯನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ಯಾವುದಾದರೂ ದೂರುಗಳು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.