alex Certify BIG NEWS: ಶಿಕ್ಷಣ ಕೊಡುವ ನೆಪದಲ್ಲಿ ಮತಾಂಧತೆಯ ವಿಷಪ್ರಾಶನ; RSS ವಿರುದ್ಧ ಮತ್ತೆ ಕಿಡಿಕಾರಿದ JDS | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಣ ಕೊಡುವ ನೆಪದಲ್ಲಿ ಮತಾಂಧತೆಯ ವಿಷಪ್ರಾಶನ; RSS ವಿರುದ್ಧ ಮತ್ತೆ ಕಿಡಿಕಾರಿದ JDS

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರ್.ಎಸ್.ಎಸ್.ಬಗ್ಗೆ ಎತ್ತಿದ್ದ ಮೂಲಭೂತ ಪ್ರಶ್ನೆಗಳನ್ನು ಸಮರ್ಥಿಸಿರುವ ಜೆಡಿಎಸ್ ರಾಜ್ಯ ಘಟಕ, ಇದೆಲ್ಲವೂ ಜನರಿಗೆ ತಿಳಿಯಲೇಬೇಕಾದ ತುರ್ತು ಅಂಶಗಳು ಎಂದು ಹೇಳಿದೆ. ಅಲ್ಲದೇ ಆರ್.ಎಸ್.ಎಸ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದೆ.

IRCTC ಶೇರು ಖರೀದಿಸಿದ್ದವರಿಗೆ ಭರ್ಜರಿ ‌ʼಬಂಪರ್ʼ

ಆರ್.ಎಸ್.ಎಸ್. ಎನ್ನುವುದು ಅಧಿಕೃತ ಸಂಸ್ಥೆಯೇ? ಅದು ಎಲ್ಲಿ? ಯಾವಾಗ ನೋಂದಣಿ ಆಗಿದೆ? ಅದರ ಅಧಿಕೃತ ಕಚೇರಿ ಎಲ್ಲಿದೆ? ಅದರ ಕೆಲಸ ಸಮಾಜ ಸೇವೆಯೋ ಅಥವಾ ರಾಜಕೀಯವೋ? ಅಥವಾ ಹಣ ಮಾಡುವುದೋ? ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಗುರುದಕ್ಷಿಣೆ ಸೇರಿದಂತೆ ದೇಶ-ವಿದೇಶಗಳಿಂದ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ಅದಕ್ಕೆ ಸಂಘ ಲೆಕ್ಕ ಕೊಟ್ಟಿದೆಯಾ? ತನ್ನ ವಹಿವಾಟಿನ ಬಗ್ಗೆ ಬ್ಯಾಲೆನ್ಸ್ ಶೀಟ್ ಇಟ್ಟುಕೊಂಡಿದೆಯಾ? ಅದನ್ನು ಪರಿಶೀಲನೆ ಮಾಡಿದ ಲೆಕ್ಕ ಪರಿಶೋಧಕರು ಯಾರು? ಶಾಲೆಗಳಲ್ಲಿ ಬಾಲ ಸ್ವಯಂ ಸೇವಕರ ಬ್ರೈನ್ ವಾಶ್ ಮಾಡುತ್ತಿರುವುದು ಸುಳ್ಳೆ? ಎಂದು ಕೇಳಿದೆ.

ದುರ್ಗಾ ಪೂಜೆ ಸಂದರ್ಭದಲ್ಲಿ ತುಂಬಿ ತುಳುಕಿದ ಕೋಲ್ಕತ್ತಾ ರೆಸ್ಟೋರೆಂಟ್‌ ಗಳು…!

ಶಿಕ್ಷಣ ಕೊಡುವ ನೆಪದಲ್ಲಿ ಮತಾಂಧತೆಯ ವಿಷಪ್ರಾಶನ ಮಾಡುತ್ತಿರುವುದು ಪೊಳ್ಳಾ? ಸಂಘದ ಶಾಖೆಗಳಲ್ಲಿ ತ್ರಿಶೂಲ, ಖಡ್ಗದಂಥ ಆಯುಧಗಳನ್ನು ಇಡುವುದು ಅಕ್ರಮ. ಇದಕ್ಕೆ ಪರವಾನಗಿ ಪಡೆಯಲಾಗಿದೆಯೇ? ಇಂಥ ಹಲವು ಪ್ರಶ್ನೆಗಳನ್ನು ಕುಮಾರಸ್ವಾಮಿ ಅವರು ಕೇಳಿದ್ದರು. ಈ ಪ್ರಶ್ನೆಗಳಿಗೆ ಉತ್ತರ ಕೊಡುವ ಎದೆಗಾರಿಕೆಯನ್ನು ಬಿಜೆಪಿ ತೋರಲಿಲ್ಲ ಯಾಕೆ? ಪಟ್ಟಿ ಮಾಡಿ ಕುಮಾರಸ್ವಾಮಿಯನ್ನು ಕೆಣಕಿರುವ ಬಿಜೆಪಿ, ಸಂಘದ ಕಾನೂನು-ಸಂವಿಧಾನ ವಿರೋಧಿ ಕೃತ್ಯಗಳ ಬಗ್ಗೆ ಯಾಕೆ ಮೌನ ವಹಿಸಿದೆ? ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳನ್ನು ದೇಶದ್ರೋಹಿಗಳು ಎಂದು ಕರೆಯಲಾಗುತ್ತದೆ. ಹಾಗಾದರೆ ಆರ್.ಎಸ್.ಎಸ್ ನ್ನು ಏನೆಂದು ಕರೆಯಬೇಕು? ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದೆ.

ಮಾಜಿ ಸಿಎಂ ಎತ್ತಿದ್ದು ವೈಯಕ್ತಿಕ ವಿಷಯಗಳಲ್ಲ, ಆದರೆ ಬಿಜೆಪಿ ಅವರ ವೈಯಕ್ತಿಕ ವಿಚಾರಗಳಲ್ಲಿ ಮೂಗು ತೂರಿಸಿದೆ. ಸದನದಲ್ಲಿಯೇ ತಮ್ಮ ಖಾಸಗಿ ಬದುಕಿನ ಬಗ್ಗೆ ಮಾತನಾಡುವ ಎದೆಗಾರಿಕೆ ತೋರಿದ ಕುಮಾರಸ್ವಾಮಿ ಅವರೆಲ್ಲಿ? ಅದೇ ಸದನದಲ್ಲಿ ನೀಚ ಕೃತ್ಯ ಎಸಗಿದ ಬಿಜೆಪಿ ನಾಯಕರೆಲ್ಲಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ತಿರುಗೇಟು ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...