ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಕೊರೊನಾ ಸಂಕಷ್ಟದ ಸಂದರ್ಭದಿಂದಾಗಿ ಸರಿಯಾಗಿ ತರಗತಿಗಳೇ ನಡೆದಿಲ್ಲ. ಪಾಠವನ್ನೂ ಮಾಡಲಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸುವುದಾದರೂ ಹೇಗೆ? ಎಲ್ಲಿಯೂ ನಡೆಯದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಸಚಿವರು ತಮ್ಮ ಸ್ವಪ್ರತಿಷ್ಠೆಗಾಗಿ ನಮ್ಮಲ್ಲಿ ನಡೆಸುತ್ತಿರುವುದಾದರೂ ಯಾಕೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.
ಬಂಗಾಳದಲ್ಲಿ ಮುಂದುವರೆದ ರಾಜಕೀಯ ದ್ವೇಷ; ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ
ಅಲ್ಲದೇ ಸರ್ಕಾರಕ್ಕೆ ಗಡುವು ನೀಡಿರುವ ಪೋಷಕರು, ಎರಡು ದಿನಗಳ ಒಳಗಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದು ಮಾಡದಿದ್ದರೆ ಕೋರ್ಟ್ ಮೊರೆ ಹೋಗೋದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೈ ಕೋರ್ಟ್ ನ್ಯಾಯಾದಿಶರಿಗೂ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.