alex Certify BIG NEWS: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ ಆರಂಭ; ಕಿಚ್ಚ ಸುದೀಪ್, ಜೆ.ಪಿ.ನಡ್ಡಾ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ ಆರಂಭ; ಕಿಚ್ಚ ಸುದೀಪ್, ಜೆ.ಪಿ.ನಡ್ಡಾ ಭಾಗಿ

ಶಿಗ್ಗಾಂವಿ: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿಯಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರೋಡ್ ಶೋ ಆರಂಭವಾಗಿದ್ದು, ಮುಖ್ಯಮಂತ್ರಿಗಳಿಗೆ ನಟ ಕಿಚ್ಚ ಸುದೀಪ್, ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ. ನಡ್ದಾ ಸಾಥ್ ನೀಡಿದ್ದಾರೆ.

ಶಿಗ್ಗಾಂವಿಯಲ್ಲಿ ಜನಸಾಗರವೇ ಹರಿದು ಬಂದಿದ್ದು, ಸಿಎಂ ಬೊಮ್ಮಾಯಿ ಪರ ಜಯಘೋಷ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ. ರೋಡ್ ಶೋ ಮೂಲಕವಾಗಿ ಸಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ರೋಡ್ ಶೋ ಆರಂಭಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು, ಈ ವೇಳೆ ನಟ ಸುದೀಪ್, ಜೆ.ಪಿ. ನಡ್ಡಾ ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...