ಬೆಂಗಳೂರು: ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ರೆಹಮಾನ್ ಖಾನ್ ಎಂಬುವವರು, ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಲು ಪ್ರಧಾನಿ ಮೋದಿಯವರಿಗೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಭಾರತ ರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ ಎಂದು ತಿಳಿಸಿದೆ.
ಪಡ್ಡೆ ಹುಡುಗರ ನಿದ್ದೆಗೆಡಿಸಿದ ತಾನ್ಯ ಹೋಪ್ ಹಾಟ್ ಫೋಟೋಶೂಟ್
ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಅರ್ಜಿ ವಜಾಗೊಳಿಸಿದೆ.