ಶಿವಮೊಗ್ಗ: ಶಿವಮೊಗ್ಗದಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಿದೆ.
ಶಂಕಿತ ಉಗ್ರರು ವಿದೇಶಿ ಭಯೋತ್ಪಾದಕರ ಸಲಹೆಯಂತೆ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಮಾತ್ರವಲ್ಲದೇ ಆಗುಂಬೆ, ವರಾಹಿ ನದಿ ತೀರ ಸೇರಿದಂತೆ 25 ಕಡೆಗಳಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಶಂಕಿತ ಉಗ್ರ ಶಾರಿಕ್, ಮಾಜ್ ಮುನೀರ್, ಸಯ್ಯದ್ ಯಾಸಿನ್ ಹೆಸರು ಕೂಡ ಚಾರ್ಜ್ ಶೀಟ್ ನಲ್ಲಿದೆ. ಮಾಜ್ ಹಾಗೂ ಯಾಸಿನ್ ಬಿ ಟೆಕ್ ಪದವಿಧರರಾಗಿದ್ದು, ದೇಶದ ಸಮಗ್ರತೆ ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿದ್ದಾರೆ ಎಂದು ಚಾರ್ಜ್ ಶೀಟ್ ನ ಹಲವು ಅಂಶಗಳನ್ನು ಎನ್ ಐಎ ಪ್ರಕಟಿಸಿದೆ.