alex Certify Big News: ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು

ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಎಸ್.‌ಆರ್.‌ ಬೊಮ್ಮಾಯಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವರ್ಷದ ಡಿಸೆಂಬರ್ ತಿಂಗಳಲ್ಲಿ ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿದ್ದು, ಇದಕ್ಕಾಗಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ವಿಮಾನಯಾನ ಸಚಿವರಿಗೆ ಈ ಕುರಿತು ಪ್ರಸ್ತಾವನೆ ಕಳುಹಿಸಿ ಅಲ್ಲಿಂದ ಅನುಮೋದನೆ ಪಡೆದ ಕೂಡಲೇ ವಿಮಾನ ನಿಲ್ದಾಣಕ್ಕೆ ನಾಮಕರಣದ ಆದೇಶವನ್ನು ಪಡೆದುಕೊಳ್ಳುತ್ತೇವೆ ಎಂದು ಹೇಳಿದ ಬಸವರಾಜ ಬೊಮ್ಮಾಯಿ, ಉಡಾನ್ ಯೋಜನೆಯಡಿ ಕಾಮಗಾರಿ ಕೈಗೊಂಡಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರದ ಅನುಮತಿ ಪಡೆದುಕೊಳ್ಳಲಾಗುವುದು. ಎಟಿಸಿ ಪರಿಕರಗಳನ್ನು ಅಳವಡಿಸಿ, ಸೌಲಭ್ಯಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...