alex Certify BIG NEWS: ಶಿವಮೊಗ್ಗದ ವಿವಿಧೆಡೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗದ ವಿವಿಧೆಡೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ ಜಪ್ತಿ

ಶಿವಮೊಗ್ಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ನಡೆಯದಂತೆ ಅಧಿಕಾರಿಗಳು ನಿಗಾವಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ದಾಖಲೆ ಇಲ್ಲದ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ಲಕ್ಷಾಂತರ ರೂಪಾಯಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ 27.60 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1.79 ಲಕ್ಷ ನಗದು ಹಣ ಜಪ್ತಿ ಮಾಡಲಾಗಿದೆ

ಭದ್ರಾವತಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.25 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿಯ ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...