ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟುಹಬ್ಬಕ್ಕೆ ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ವಿಶೇಷ ಕೊಡುಗೆ ನೀಡಿದ್ದಾರೆ.
ಶಿವಮೊಗ್ಗದ ಸೋಗಾನೆಯಲ್ಲಿ 450 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ರಿಮೋಟ್ ಮೂಲಕ ಉದ್ಘಾಟನೆ ಮಾಡಿದರು.
ಬಳಿಕ ನೂತನ ಏರ್ ಪೋರ್ಟ್ ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು. 3200 ಕಿ.ಮೀ ಉದ್ದದ ರನ್ ವೆಯನ್ನು ವಿಮಾನ ನಿಲ್ದಾಣ ಹೊಂದಿದೆ. ಕರ್ನಾಟಕದ 2ನೇ ಅತಿದೊಡ್ಡ ರನ್ ವೇ ಇದಾಗಿದೆ.
ಇದೇ ವೇಳೆ ಪ್ರಧಾನಿ ಮೋದಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ, ಶಿಮುಲ್ ಪ್ಯಾಕಿಂಗ್ ಹಾಲು ಘಟಕ, ರೈಲ್ವೆ ಹೆದ್ದಾರಿ ಕಾಮಗಾರಿಗೆ ಚಾಲನೆ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.