ಕಲಬುರ್ಗಿ; ಆಜಾನ್ ವಿಚಾರವಾಗಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದ್ದು, ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಸೌಂಡ್ ಬಳಸಬೇಕು ಎಂಬ ನಿಯಮವಿದ್ದು, ಅದರಂತೆ ಪಾಲನೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆಜಾನ್ ವಿಚಾರವಾಗಿ ಕೋರ್ಟ್ ನೀಡಿರುವ ಆದೇಶ ಪಾಲಿಸುವುದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಆಯಾ ಸ್ಥಳೀಯ ಮುಖಂಡರ ಜತೆ ಚರ್ಚಿಸಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವಂತೆ ಕಾನೂನು ಪಾಲಿಸುವಂತೆ ಸೂಚಿಸಲಾಗಿದೆ ಎಂದರು.
Earth Day 2022: ಕಳವಳಕ್ಕೆ ಕಾರಣವಾಗ್ತಿದೆ ಈ ಸಂಗತಿ
ಇದೇ ವೇಳೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಸ್ವಪಕ್ಷ ನಾಯಕರಿಂದಲೇ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಅಂತಹ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.
ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಕಳೆದ ಚುನಾವಣೆಗಿಂತ ಈ ಬಾರಿ ಅತಿ ಹೆಚ್ಚು ಸ್ಥಾನಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇದ್ದೇವೆ ಎಂದು ಹೇಳಿದರು.