ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೆಗ್ಗಾನ್ ಆಸ್ಪತ್ರೆಯಿಂದ ಶ್ರೀಗಳನ್ನು ಚಿತ್ರದುರ್ಗ ಜೈಲಿಗೆ ಮತ್ತೆ ಶಿಫ್ಟ್ ಮಾಡಲಾಗಿದೆ.
ಪೊಲೀಸ್ ವಾಹನದಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ವಾಮೀಜಿಗಳಿಗೆ ನಿನ್ನೆ ಆಂಜಿಯೋಗ್ರಾಮ್ ಪರೀಕ್ಷೆ ಮಾಡಲಾಗಿತ್ತು. ಮುರುಘಾಶ್ರೀಗಳ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಡಾ.ಶಿವಮೂರ್ತಿ ಶರಣರ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಅನಾರೋಗ್ಯ ಸಮಸ್ಯೆಯಿಲ್ಲ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗದ ಜೈಲಿಗೆ ಪೊಲೀಸರು ಸ್ಥಳಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.