alex Certify BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಳೆ ಚಾಲನೆ; ಇಲ್ಲಿದೆ ಮೋದಿಯವರ ಕಾರ್ಯಕ್ರಮದ ಕಂಪ್ಲೀಟ್ ಡೀಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಳೆ ಚಾಲನೆ; ಇಲ್ಲಿದೆ ಮೋದಿಯವರ ಕಾರ್ಯಕ್ರಮದ ಕಂಪ್ಲೀಟ್ ಡೀಟೇಲ್ಸ್

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಹತ್ವದ ಸಂಗತಿ ಎಂದರೆ ಈ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬದ ದಿನದಂದೇ ಈ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಗುತ್ತಿದೆ.

ನಾಳೆ ಬೆಳಿಗ್ಗೆ 11-35 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ನರೇಂದ್ರ ಮೋದಿಯವರು 11-45 ರಿಂದ 11-55 ರವರೆಗೆ ಟರ್ಮಿನಲ್ ಬಿಲ್ಡಿಂಗ್ ವೀಕ್ಷಿಸಲಿದ್ದಾರೆ. 12 ರಿಂದ 1-15 ರ ವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿರುವ ನರೇಂದ್ರ ಮೋದಿಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1-30 ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗಾವಿ ವಿಮಾನ ನಿಲ್ದಾಣಕ್ಕೆ 2-20ರ ವೇಳೆಗೆ ಬಂದಿಳಿಯುವ ನರೇಂದ್ರ ಮೋದಿಯವರು ಅಲ್ಲಿಂದ ಕಾರ್ಯಕ್ರಮದ ಸ್ಥಳಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಳಲಿದ್ದಾರೆ. ನಂತರ 2-50ರಿಂದ 3-15 ರ ವರೆಗೆ ರೋಡ್ ಶೋನಲ್ಲಿ ಭಾಗವಹಿಸುವ ಅವರು, ಸಮಾವೇಶ ನಡೆಯುವ ಸ್ಥಳಕ್ಕೆ ತೆರಳಲಿದ್ದಾರೆ.

ಇದೇ ಸಂದರ್ಭದಲ್ಲಿ ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ಮೋದಿಯವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಮುಗಿದ ಬಳಿಕ ಸಂಜೆ 5-10ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...