alex Certify BIG NEWS: ಶಿಶುಪಾಲನಿಗೆ ಕೃಷ್ಣನೇ ತಕ್ಕ ಶಾಸ್ತಿ ಮಾಡಿದ್ದ; ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಲ್ಲ; ಹಂಸಲೇಖ ಹೇಳಿಕೆಗೆ ವಿಶ್ವಪ್ರಸನ್ನ ತೀರ್ಥರ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಶುಪಾಲನಿಗೆ ಕೃಷ್ಣನೇ ತಕ್ಕ ಶಾಸ್ತಿ ಮಾಡಿದ್ದ; ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಲ್ಲ; ಹಂಸಲೇಖ ಹೇಳಿಕೆಗೆ ವಿಶ್ವಪ್ರಸನ್ನ ತೀರ್ಥರ ತಿರುಗೇಟು

ಉಡುಪಿ: ದಲಿತರ ಮನೆಯಲ್ಲಿ ಪೇಜಾವರ ಶ್ರೀ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವಪ್ರಸನ್ನ ಶ್ರೀಗಳು, ಹಂಸಲೇಖ ಬಾಯಲ್ಲಿ ಇಂತಹ ಮಾತುಗಳು ಬರಬಾರದಿತ್ತು. ಪ್ರಚಾರಕ್ಕಾಗಿ ಸಾಕಷ್ಟು ಜನರು ಹೀಗೆ ಮಾತನಾಡುತ್ತಾರೆ. ಆದರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಗುರುಗಳು ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡವರು. ಆದ್ದರಿಂದ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆ ಹಾವಳಿ, ಭೂಕಂಪ ಆದಾಗಲೂ ಭೇಟಿ ಕೊಡುತ್ತಿದ್ದರು. ಸಮಾಜದ ಎಲ್ಲರ ಉದ್ದಾರವನ್ನು ವಿಶ್ವೇಶ್ವರ ತೀರ್ಥರು ಬಯಸಿದ್ದರು. ನಮ್ಮ ಉದ್ದೇಶ ಪ್ರಾಮಾಣಿಕವಾಗಿದ್ದರೆ ಸಾಕು. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲುವುದಿಲ್ಲ ಎಂದು ಹೇಳಿದರು.

ಬೊಜ್ಜಿಗೆ ಜೋತಿಷ್ಯ ಶಾಸ್ತ್ರದಲ್ಲಿದೆ ʼಪರಿಹಾರʼ

ಶ್ರೀಕೃಷ್ಣನಿಗೆ ಅಗ್ರ ಪೂಜೆ ನೀಡುವಾಗ ಶಿಶುಪಾಲ ವಿರೋಧಿಸಿದ್ದ. ಆ ಕೃಷ್ಣನೇ ಬೇಕಾದ ಪ್ರತೀಕಾರ ಮಾಡುತ್ತಾನೆ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ಯಾರ ಹೊಗಳಿಕೆಗಾಗಿ ನಾವು ಈ ಕೆಲಸ ಮಾಡಿದ್ದಲ್ಲ. ಐಕ್ಯ ಸಂದೇಶ ನೀಡುವುದಕ್ಕಾಗಿ ನಮ್ಮ ಕಾರ್ಯಕ್ರಮಗಳು ನಡೆಯುತ್ತವೆ. ನಮ್ಮ ಗುರುಗಳ ಮೇಲೆ ಅಭಿಮಾನದಿಂದ ಯಾರಾದರೂ ಧರಣಿ ಮಾಡಿದರೆ ಅದು ಪ್ರತಿಭಟನೆ ಮಾಡುವವರ ವೈಯಕ್ತಿಕ ವಿಚಾರವಾಗಿರುತ್ತದೆ. ನಾವು ಯಾವುದೇ ರೀತಿಯ ಪ್ರತಿಭಟನೆ ಮಾಡಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...