ಬೆಂಗಳೂರು: ಖಾಸಗಿ ಶಾಲೆಗಳು ಕೆಲ ಫೈನಾನ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಬಡ್ಡಿ ಹಣ ಪಡೆದು ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡುವಂತೆ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ನೀಡಿದರೆ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ ಪಡೆದ ವೃದ್ಧನ ದೇಹದಲ್ಲಾಯ್ತು ವಿಚಿತ್ರ ಬದಲಾವಣೆ..!
ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಬಡ್ದಿಗೆ ಹಣ ಪಡೆದು ಪೀಸ್ ಕಟ್ಟುವಂತೆ ಶಾಲೆಗಳು ಒತ್ತಡ ಹಾಕುತ್ತಿದ್ದರೆ ಈ ಬಗ್ಗೆ ಬಿಇಒ ಗೆ ದೂರು ನೀಡಿ. ದೂರು ನೀಡಿದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ; ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಅಧಿಕಾರಿಗಳು; ತಾಕತ್ತಿದ್ದರೆ ಕೇಸ್ ಹಾಕಿ ಎಂದ ಶಾಸಕ
ಇನ್ನು ಶುಲ್ಕ ಕಟ್ಟಿಲ್ಲವೆಂದು ಆನ್ ಲೈನ್ ಕ್ಲಾಸ್ ಗಳನ್ನು ನಿಲ್ಲಿಸುವಂತಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್, ಹೈಕೋರ್ಟ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಆನ್ ಲೈನ್ ಕ್ಲಾಸ್ ನಿಲ್ಲಿಸಿದರೆ ಅಂತವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.