alex Certify BIG NEWS: ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮೂವರಿಗೂ ಪ್ರಮಾಣವಚನ ಬೋಧಿಸಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಕಾಂಗ್ರೆಸ್ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದರೂ ಬಳಿಕ ವಿಧಾನ ಪರಿಷತ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಶೆಟ್ಟರ್ ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯದ ಎರಡನೇ ಆರಂಭಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...