ಬೆಳಗಾವಿ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೋಲಿಸುವ ಪಣ ತೊಟ್ಟಿದ್ದಾರೆ.
ಬೆಳಗಾವಿಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಪ್ರಚಾರ ನಡೆಸಿದ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಹರಿಹಾಯ್ದರು. ಜಗದೀಶ್ ಶೆಟ್ಟರ್ ಹಾಗೂ ಸವದಿ ಇಬ್ಬರೂ ಬಿಜೆಪಿಗೆ ದ್ರೋಹ ಮಾಡಿದ್ದಾರೆ. ಬಿಜೆಪಿ ಬೆನ್ನಿಗೆ ಚೂರಿ ಹಾಕಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಬೆನ್ನಿಗೆ ಚೂರಿ ಹಾಕಿದ ಸವದಿಯನ್ನು ಸೋಲಿಸುವ ಜವಾಬ್ದಾರಿಯನ್ನು ಕ್ಷೇತ್ರದ ಜನರು ತೆಗೆದುಕೊಳ್ಳಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಶೆಟ್ಟರ್ ಈ ಬಾರಿ ಸೋಲುವುದು ಖಚಿತ ಎಂದು ಹೇಳಿದರು.