ರಾಜ್ಯ ಬಿಜೆಪಿ ಸರ್ಕಾರದ ಕೆಲ ಸಚಿವರು, ಗುತ್ತಿಗೆದಾರರಿಂದ ಕಾಮಗಾರಿಗಳ ಬಿಲ್ ಸಂದರ್ಭದಲ್ಲಿ ಶೇ.40 ಕಮೀಷನ್ ಪಡೆಯಲಾಗುತ್ತಿದೆ ಎಂಬ ಆರೋಪ ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಕುರಿತು ಪತ್ರ ಬರೆದಿದ್ದ ಹಿನ್ನಲೆಯಲ್ಲಿ ದಾಖಲೆ ಸಲ್ಲಿಸುವಂತೆ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಸೂಚನೆ ಬಂದಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿರುವ ಕೇಂದ್ರ ಗೃಹ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ದಾಖಲೆ ಸಲ್ಲಿಸಲು ಸೂಚಿಸಲಾಗಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ದಾಖಲೆ ಸಲ್ಲಿಸಲಿದ್ದಾರೆ.