
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ವಿಧಿವಶರಾಗಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಬೆಳಿಗ್ಗೆ ಭಂಡಾರ ಭವನದಲ್ಲಿ ಬಿದ್ದ ಪರಿಣಾಮ ಅಸ್ವಸ್ಥಗೊಂಡಿದ್ದರು.
ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.