alex Certify BIG NEWS: ಸಂಜೆಯೊಳಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಜೆಯೊಳಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಸಮಯವಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ನಿಟ್ಟಿನಲ್ಲಿ ಕೇಂದ್ರ ನಾಯಕರು ಸಭೆ ಮೇಲೆ ಸಭೆ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನವದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆಯೊಳಗಾಗಿ ಬಿಡುಗಡೆಯಾಗಲಿದೆ. ಅಭ್ಯರ್ಥಿ ಪಟ್ಟಿ ಬಿಡುಗಡೆಗೂ ಮುನ್ನ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಒಟ್ಟಾರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಟಿಕೆಟ್ ಆಕಾಂಕ್ಷಿಗಳಲ್ಲಿ ಎದೆಬಡಿತ ಜೋರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...