alex Certify BIG NEWS: ಸಂಪುಟ ದರ್ಜೆ ಸ್ಥಾನ ತಿರಸ್ಕರಿಸಿದ ಬಿ.ಎಸ್. ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ದರ್ಜೆ ಸ್ಥಾನ ತಿರಸ್ಕರಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದಿಂದ ತಮಗೆ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನವನ್ನು ನಿರಾಕರಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಈ ಕುರಿತು ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಓರ್ವ ಮಾಜಿ ಸಿಎಂ ಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳು, ಸ್ಥಾನಮಾನಗಳನ್ನು ನನಗೆ ನೀಡಿದರೆ ಸಾಕು. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಕೋರುತ್ತೇನೆ ಎಂದು ಯಡಿಯೂರಪ್ಪ ಪತ್ರದಲ್ಲಿ ಮನವಿ ಮಾಡಿದ್ದಾರೆ.

ʼಚಿನ್ನʼದ ಹುಡುಗನಿಗೆ ಒಂದು ವರ್ಷ ಉಚಿತ ಪ್ರಯಾಣದ ಆಫರ್‌ ಕೊಟ್ಟ ಇಂಡಿಗೋ

ಸಿಎಂ ಬಸವರಾಜ್ ಬೊಮ್ಮಾಯಿ ಅವಧಿ ಇರುವವರೆಗೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ನಿನ್ನೆಯಷ್ಟೇ ಆದೇಶ ಹೊರಡಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...