alex Certify BIG NEWS: ಸಂಪುಟ ವಿಸ್ತರಣೆ ಒತ್ತಡ; ಸಿಎಂ ಬೊಮ್ಮಾಯಿ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆ ಒತ್ತಡ; ಸಿಎಂ ಬೊಮ್ಮಾಯಿ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವಾಕಾಂಕ್ಷಿಗಳು ಈಗಲೇ ಸಂಪುಟ ವಿಸ್ತರಣೆಯಾಗಲಿ ಎಂದು ಪಟ್ಟು ಹಿಡಿದಿದ್ದಾರೆ. ಶಾಸಕರ ಒತ್ತಡಕ್ಕೆ ಸಮಾಧಾನವಾಗಿಯೇ ಉತ್ತರಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅದು ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಯಾವಾಗ ಭರ್ತಿ ಮಾಡಬೇಕು ಎಂಬುದು ವರಿಷ್ಠರ ಗಮನದಲ್ಲಿದೆ. ವರಿಷ್ಠರು ನನ್ನನ್ನು ಕರೆದು ಮಾತನಾಡಿದಾಗ ಎಲ್ಲವನ್ನೂ ವಿವರಿಸುತ್ತೇನೆ ಎಂದು ತಿಳಿಸಿದ್ದಾರೆ.

ನಿಗಮ ಮಂಡಳಿ ಬಗ್ಗೆ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪಕ್ಷದ ನಾಯಕರಲ್ಲ ಚರ್ಚಿಸಿ ಪ್ರಸ್ತಾವನೆ ಸಲ್ಲಿಸುತ್ತಾರೆ. ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...