ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವೂ ಗೊಂದಲದ ಗೂಡಾಗುತ್ತಲೇ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ತಿಳಿಸುವುದಾಗಿ ವರಿಷ್ಠರು ಹೇಳಿದ್ದಾರೆ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಘೋಷಿಸಿದ್ದಾರೆ. ಈ ಮೂಲಕ ಜನರ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾಕೆ ಯೋಜನೆ ಜಾರಿ ಮಾಡಿಲ್ಲ. ಕೊಟ್ಟಿದ್ದ ಭರವಸೆಯನ್ನೇ ಅವರು ಈಡೇರಿಸಿಲ್ಲ. ಈಗ ಹೊಸ ಘೋಷಣೆ ಮಾಡುತ್ತಿದ್ದಾರೆ. ಆದರೆ ನಾವು ಹಾಗೆ ಮಾಡಿಲ್ಲ ನುಡಿದಂತೆ ನಡೆದಿದ್ದೇವೆ. ಘೋಷಣೆ ಮಾಡಿದ ಯೋಜನೆ ಜಾರಿಗೊಳಿಸಿದ್ದೇವೆ ಎಂದರು.