ಬೆಂಗಳೂರು: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ಹೋದ ಬಳಿಕ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ವಿಚಾರವಾಗಿ ಅಮಿತ್ ಶಾ ದೆಹಲಿಗೆ ಹೋಗಿ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಕೇವಲ ಊಹಾಪೋಹ. ಅಂತಹ ಚರ್ಚೆಯೂ ನಮ್ಮ ಮುಂದೆ ಇಲ್ಲ ಎಂದು ತಿಳಿಸಿದರು.
Big News: ಆಸಿಡ್ ಆರೋಪಿಯ ವಿವಿಧ ಚಹರೆಗಳುಳ್ಳ ಫೋಟೋ ಬಿಡುಗಡೆಗೊಳಿಸಿದ ಪೊಲೀಸ್; ಆರೋಪಿ ಕಂಡರೆ ಕೂಡಲೇ ಮಾಹಿತಿ ನೀಡಿ ಎಂದು ಮನವಿ
ಮುಂದಿನ ವಾರ ಡಿಸಿ, ಸಿಇಓಗಳ ಜತೆ ಸಭೆ ನಡೆಸುತ್ತೇನೆ. ವಿವಿಧ ಇಲಾಖೆ ಅಭಿವೃದ್ಧಿ, ಅನುಷ್ಠಾನದ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.