ಬೆಂಗಳೂರು: ಬೆಳಗಾವಿಗೆ ಬರುವುದಾಗಿ ಮಹಾರಾಷ್ಟ್ರ ಸಚಿವರ ಹೇಳಿಕೆ ವಿಚಾರವಾಗಿ ಕಿಡಿಕಾರಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಬೆಳಗಾವಿಗಷ್ಟೇ ಅಲ್ಲ, ಬೆಂಗಳೂರಿಗೂ ಬರಲಿ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಯಾವ ಸಮಯ, ಯಾಕೆ ಬರಬೇಕು ಎಂಬುದು ಉಖ್ಯ ಆಗುತ್ತದೆ. ಯಾರೇ ಆಗಲಿ, ಜನರ ಭಾವನೆ ಕೆರಳಿಸುವ ಕೆಲಸ ಮಾಡಬಾರದು. ಸಚಿವರಾಗಲಿ, ಸಾಮಾನ್ಯ ಜನರೇ ಆಗಿರಲಿ ಕಾನೂನು ಎಲ್ಲರಿಗೂ ಒಂದೇ. ಶಾಂತಿ ಭಂಗ ಮಾಡಿದರೆ ಯಾರೇ ಆಗಿದ್ದರೂ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರಲಾರರು, ಬೆಳಗಾವಿಗೆ ಬಂದು ಜನರ ಭಾವನೆ ಕೆರಳಿಸುವ ಕೆಲಸ ಮಾಡಿದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.