ಬೆಂಗಳೂರು: ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ 29 ಸಚಿವರು ಸೇರ್ಪಡೆಯಾಗಿದ್ದು, ಈವರೆಗೂ ಯಾರಿಗೂ ಖಾತೆ ಹಂಚಿಕೆಯಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ತಿಳಿಸಿದರು.
ಕೊರೊನಾ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಅಮೆಜಾನ್
ಈಗಾಗಲೇ ನೂತನ ಸಚಿವರಿಗೆ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾವಾರು ಜವಾಬ್ದಾರಿ ವಹಿಸಲಾಗಿದೆ. ಇದೀಗ ಖಾತೆ ಹಂಚಿಕೆ ಮಾಡಲಾಗುತ್ತಿದ್ದು, ಹಿಂದಿನ ಖಾತೆಯಲ್ಲಿಯೇ ಹಲವು ಸಚಿವರು ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.