alex Certify BIG NEWS: ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಭುಗಿಲೆದ್ದ ಪ್ರತಿಭಟನೆ; ಗೃಹ ಸಚಿವರ ಮನೆ ಬಾಗಿಲು ತೆಗೆದು ಒಳನುಗ್ಗಲು ಯತ್ನ; ABVP ಕಾರ್ಯಕರ್ತರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಭುಗಿಲೆದ್ದ ಪ್ರತಿಭಟನೆ; ಗೃಹ ಸಚಿವರ ಮನೆ ಬಾಗಿಲು ತೆಗೆದು ಒಳನುಗ್ಗಲು ಯತ್ನ; ABVP ಕಾರ್ಯಕರ್ತರು ಪೊಲೀಸ್ ವಶಕ್ಕೆ

Home Minister Araga Jnanendra called by High command to Delhi | ಬಿಜೆಪಿ ಹೈಕಮಾಂಡ್ ಬುಲಾವ್ ; ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ದೆಹಲಿಗೆ ! | Headline Karanataka

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿರುವ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಜಯಮಹಲ್ ಬಳಿ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸದ ಎದುರು ಪ್ರತಿಭಟನಾ ಧರಣಿ ನಡೆಸಿದ ಎಬಿವಿಪಿ ಕಾರ್ಯಕರ್ತರು, ರಾಜ್ಯದಲ್ಲಿ ಸಾಲು ಸಾಲು ಹತ್ಯೆ. ಪ್ರಕರಣಗಳು ನಡೆಯುತ್ತಿದ್ದು, ಯುವ ಜನತೆಗೆ, ಸಾರ್ವಜನಿಕರಿಗೆ ರಕ್ಷಣೆ ಇಲ್ಲದಾಗಿದೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಗೃಹ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊಲೆಗೆಡುಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ ಎಬಿವಿಪಿ ಕಾರ್ಯಕರ್ತರು, ಗೃಹ ಸಚಿವರ ಮನೆಗೆ ನುಗ್ಗಿ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಗಳು ಎಬಿವಿಪಿ ಕಾರ್ಯಕರ್ತರನ್ನು ಎಳೆದು ತಂದಿದ್ದಾರೆ. ಪೊಲೀಸರು ಹಾಗೂ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ, ವಾಗ್ವಾದ ನಡೆದಿದೆ. ಗೃಹ ಸಚಿವ ನಿವಾಸದ ಬಳಿ ಇದ್ದ ಹೂ ಕುಂಡಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನೂರಾರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...