ಬೆಂಗಳೂರು: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕಾಂಗ್ರೆಸ್ ದೌರ್ಜನ್ಯ ಹಾಗೂ ದಬ್ಬಾಳಿಕೆ ಆರೋಪ ಮಾಡಿದ್ದು, ಕಾಂಗ್ರೆಸ್ ನಾಯಕರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಮಲ್ಲೇಶ್ವರಂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್, ಕ್ಷೇತ್ರದಲ್ಲಿ ಸಚಿವ ಅಶ್ವತ್ಥನಾರಾಯಣ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಲ್ಲೇಶ್ವರಂ ಕ್ಷೇತ್ರದಲ್ಲಿ ಅಶ್ವತ್ಥ ದೌರ್ಜನ್ಯ ನಡೆಸಿದ್ದಾರೆ. ಸ್ಯಾಂಕಿ ಕೆರೆ ಪರಿಸರದ ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಪ್ರತಿಭಟನೆ ನಡೆಸಿದವರ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಚಿವರು ಪ್ರತಿಭಟನಾಕಾರರ ಮೇಲೆ ದೌಜನ್ಯ ನಡೆಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.