ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಈಶ್ವರಪ್ಪನವರ ವಿರುದ್ಧ 40% ಲಂಚದ ಆರೋಪ ಮಾಡಿ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಸಂತೋಷ್ ಪಾಟೀಲ್ ತಮ್ಮ ಆತ್ಮಹತ್ಯೆಗೆ ಈಶ್ವರಪ್ಪನವರೇ ನೇರ ಕಾರಣ ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಇಂದು ಸಂಜೆ ಈಶ್ವರಪ್ಪನವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ಇದೀಗ ಶಿವಮೊಗ್ಗದಿಂದ ಬೆಂಗಳೂರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಲಿರುವ ಈಶ್ವರಪ್ಪ ಕಡೂರು ತಲುಪಿದ್ದಾರೆ. ಕಡೂರಿನಲ್ಲಿ ಭೋಜನ ಸೇವಿಸಿದ ಅವರು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಸಂಜೆ 6:00 ಗಂಟೆ ವೇಳೆಗೆ ಬೆಂಗಳೂರು ತಲುಪಲಿರುವ ಅವರು ಸಿಎಂ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರೊಂದಿಗೆ ಈಶ್ವರಪ್ಪ ಶಕ್ತಿ ಪ್ರದರ್ಶನ ನೀಡಲಿದ್ದಾರೆ. ಅವರ ಜೊತೆಗೆ ಅವರ ಪುತ್ರ ಕಾಂತೇಶ್ ಸಹ ಸಾಥ್ ನೀಡಲಿದ್ದಾರೆ.