alex Certify BIG NEWS: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ; ಸ್ವಪಕ್ಷ, ಹಿಂದೂ ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಪ್ರಧಾನಿ ಮೋದಿಗೆ ಪತ್ರ; K.S.E ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ; ಸ್ವಪಕ್ಷ, ಹಿಂದೂ ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಪ್ರಧಾನಿ ಮೋದಿಗೆ ಪತ್ರ; K.S.E ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಕಾಮಗಾರಿ ಬಿಲ್ ಬಾಕಿ ಬಿಡುಗಡೆಗೆ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ಮೋದಿಯವರಿಗೆ ಸ್ವಪಕ್ಷದ ನಾಯಕ, ಹಿಂದೂ ವಾಹಿನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕೆ ಪಾಟೀಲ್ ಪತ್ರ ಬರೆದಿದ್ದಾರೆ. ಈ ನಿಟ್ಟಿನಲ್ಲಿ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿ ಪ್ರಸಾದ್, ರಾಜ್ಯದಲ್ಲಿ ಪ್ರತಿ ಕಾಮಗಾರಿಗೆ ಸಚಿವರು, ಶಾಸಕರಿಗೆ ಶೇ.40ರಷ್ಟು ಕಮಿಷನ್ ನಿಡಬೇಕು. ಈ ಬಗ್ಗೆ ಈಗಾಗಲೇ ಗುತ್ತಿಗೆದಾರರ ಸಂಘ ಕೂಡ ಆರೋಪಿಸಿದೆ. ಈಗ ಸ್ವತಃ ಬಿಜೆಪಿ ಕಾರ್ಯಕರ್ತರು, ಹಿಂದೂವಾಹಿನಿ ಪ್ರಧಾನ ಕಾರ್ಯದರ್ಶಿಗಳೇ ಸರ್ಕಾರ ಹಾಗೂ ಸಚಿವರ ವಿರುದ್ಧ ಪತ್ರದ ಮೂಲಕ ಹೇಳುತ್ತಿದ್ದಾರೆ ಎಂದರು.

ಈ ಹಿಂದೆ ಪ್ರಧಾನಿ ಮೋದಿ ಕಾಂಗ್ರೆಸ್ ನವರದ್ದು 10% ಕಮಿಷನ್ ಸರ್ಕಾರ ಎಂದು ಆರೋಪಿಸಿದ್ದರು. ಈಗ ಅವರದ್ದೇ ಸರ್ಕಾರ, ಸಚಿವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಪತ್ರ ಬರೆಯಲಾಗಿದೆ ಈಗ ಮೌನ ವಹಿಸಿದ್ದಾರೆ. ಈಶ್ವರಪ್ಪ ವಿರುದ್ಧ ಸ್ವಪಕ್ಷದವರೇ ಆರೋಪ ಮಾಡುತ್ತಿದ್ದಾರೆ. ಈಗಲಾದರೂ ಎಚ್ಚೆತ್ತು ರಾಜ್ಯ ಸರ್ಕಾರ ಗ್ರಾಮಿಣಾಭಿವೃದ್ಧಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...