alex Certify BIG NEWS: ಸಚಿವ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್

ಬೆಳಗಾವಿ: ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು ಯಾಕೆ ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನೆಗೆ ತಿರುಗೇಟು ನೀಡಿರುವ ಡಿ.ಕೆ.ಶಿ. ನಿಮಗೆ ಸಪೋರ್ಟ್ ಮಾಡಲಿಲ್ಲ, ನಿಮ್ಮ ಜೊತೆ ಬರ್ಲಿಲ್ಲ ಎಂದು ನೀವು ನನ್ನನ್ನು ತಿಹಾರ್ ಜೈಲಿಗೆ ಕಳಿಸಿದ್ರಿ….. ಹಾಗಾಗಿ ಹೋದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನ್ನು ಶಾಶ್ವತವಾಗಿ ವಿಪಕ್ಷದಲ್ಲಿ ಕೂರಿಸಲು ಸರ್ಕಾರದ ಸ್ಥಿರತೆಯನ್ನು ಅವರ ಪಕ್ಷದವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.

ಅಪ್ಪನ ಕೈ ಹಿಡಿದಿರುವ ಮಗನ ಫೋಟೋ ಶೇರ್‌ ಮಾಡಿಕೊಂಡ ನಟಿ ನುಸ್ರತ್‌ ಜಹಾನ್

ರಾಜ್ಯದಲ್ಲಿ ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇವೆ ಎಂಬ ಬಿ.ಎಸ್.ಯಡಿಯೂರಪ್ಪ ಹೇಳಿಕೆ ಪ್ರತಿಕ್ರಿಯಿಸಿ, ಬಿ.ಎಸ್.ವೈ. ತಮಗಾದ ನೋವನ್ನ ಬಿಜೆಪಿ ಮೇಲೆ ಹೇರಲಾಗಲ್ಲ ಎಂದು ನಮ್ಮ ಮೇಲೆ ಹೇರುತ್ತಿದ್ದಾರೆ. ಅವರ ದುಃಖ, ದುಮ್ಮಾನ, ರೇಡ್, ಮಾನಸಿಕ ಹಿಂಸೆ, ರಾಜೀನಾಮೆ ನೋವು ಇದೆಲ್ಲವನ್ನು ಹೊರಹಾಕಬೇಕಲ್ಲ, ನಾವು ಫ್ರೀಯಾಗಿದ್ದೇವೆ ಎಂದು ನಮ್ಮ ಮೇಲೆ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ಥಿರತೆಯನ್ನು ಅವರ ಪಕ್ಷದವರೇ ಹಾಳು ಮಾಡುತ್ತಿದ್ದಾರೆ ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...