ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಮೃತದೇಹವನ್ನು ಹೈದರಾಬಾದ್ ನಿಂದ ಬಂದಿದ್ದ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗಿದೆ.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇದೀಗ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗಿದೆ.
ಮಧ್ಯಾಹ್ನ 1:45-ರಿಂದ 2 ಗಂಟೆ ವೇಳೆಗೆ ಸಚಿವರ ಪಾರ್ಥಿವ ಶರೀರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದ್ದು, ಅಲ್ಲಿಂದ ಸಚಿವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಮೃತದೇಹ ಕೊಂಡೊಯ್ಯಲಾಗುತ್ತಿದೆ. ಸಂಜೆ ಬೆಲ್ಲದ ಬಾಗೇವಾಡಿಯಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ.
ಆಹಾರ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ತಮ್ಮ ನಿವಾಸದ ಬಾತ್ ರೂಮ್ ನಲ್ಲಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿಯೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.