ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಸೃಷ್ಟಿಸಿರುವ ಸಚಿವ ಎಂ.ಬಿ. ಪಾಟೀಲ್ ಗೆ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಎಂ.ಬಿ. ಪಾಟೀಲ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ಕೊಡಲು ಬರುತ್ತೆ. ಆದರೆ ಇದೆಲ್ಲ ಈಗಲೇ ಬೇಡ ಎಂದರು.
ಸಚಿವ ಎಂ.ಬಿ. ಪಾಟೀಲ್ ಅವರಿಗೆ ಇದೆಲ್ಲ ಬೇಡ, ಸಚಿವರೆ. ಹೆಚ್ಚಿನ ಮಾಹಿತಿ ಬೇಕು ಎಂದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರ ಬಳಿ ಮಾತನಾಡಿ ಎಂದು ಹೇಳಿದ್ದಾರೆ. ಈ ಮೂಲಕ ನೇರವಾಗಿ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದಾರೆ.