ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಲ್ಲದೇ, ಜಿಲ್ಲೆಯಲ್ಲಿ ಗಲಾಟೆ ನಡೆಯಲು ಕಾರಣರಾಗಿದ್ದರು ಎಂದು ಆರೋಪಿಸಿ ಪೀಸ್ ಸಂಘಟನೆ ಕಾರ್ಯಕರ್ತ ರಿಯಾಜ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.
ಮದುವೆ, ಪಾರ್ಟಿ, ಫಂಕ್ಷನ್ ಎಲ್ಲೆಡೆ ಒಂದೇ ಡ್ರೆಸ್ ಧರಿಸಿ ಬರ್ತಾಳೆ ಈ ಮಹಿಳೆ..!
ಸಚಿವರ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಿಯಾಜ್ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.