ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ 40 ಪರ್ಸೆಂಟ್ ಕಮಿಷನ್ ಪಡೆದಿರುವ ಆರೋಪ ಎದುರಿಸುತ್ತಿರುವ ಸಚಿವ ಕೆ ಎಸ್ ಈಶ್ವರಪ್ಪನವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ನಾಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ನಾಳೆ ಸಂಜೆ ಭೇಟಿಯಾಗಿ ರಾಜೀನಾಮೆ ಸಲ್ಲಿಸುವುದಾಗಿ ಈಶ್ವರಪ್ಪನವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಅತ್ಯದ್ಭುತ ಕೆಲಸವನ್ನು ನಿರ್ವಹಿಸಿದ್ದೇವೆ. ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದೇನೆ ರಾಜೀನಾಮೆ ನೀಡುವ ಬಗ್ಗೆ ಎರಡು ಮೂರು ದಿನದ ಹಿಂದೆ ನಿರ್ಧರಿಸಿದ್ದೆ. ನೈತಿಕ ಜವಾಬ್ದಾರಿ ಹೊಣೆ ಹೊತ್ತು ರಾಜೀನಾಮೆಗೆ ನಿರ್ಧರಿಸಿದ್ದೇನೆ. ಈ ಕುರಿತು ನಾನು ಸಿಎಂ ಜೊತೆಗೆ ಚರ್ಚಿಸಿದ್ದೇನೆ ಎಲ್ಲವನ್ನು ಎದುರಿಸಿ ಮುಕ್ತವಾಗಿ ಹೊರ ಬರುತ್ತೇನೆ ತಪ್ಪು ಮಾಡಿದ್ದರೆ ದೇವರು ನನಗೆ ಶಿಕ್ಷೆ ನೀಡಲಿ. ಎಲ್ಲ ಕಾರ್ಯಕರ್ತರಿಗೂ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದು ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.