ಬೆಂಗಳೂರು: ಸಚಿವ ನಾರಾಯಾಣಗೌಡ ವಿರುದ್ಧ ಕೆಂಡ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇವರನ್ನು ಬೆಳೆಸುವುದಕ್ಕೆ ನಾನು ಪಕ್ಷ ಹಾಳು ಮಾಡಿಕೊಳ್ಳಬೇಕಾ? ಇವರೇನು ಮಹಾನ್ ಕೆಲಸ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾರಾಯಣ ಗೌಡರಿಗೆ ಅಂದು ಕೃಷ್ಣ ವಿರುದ್ಧ ಅಭ್ಯರ್ಥಿಯಾಗಬೇಕು ಎಂದಾಗ ಪರಿಜ್ಞಾನ ಇರಲಿಲ್ವಾ? ನಿನ್ನ ನಡವಳಿಕೆ ನೋಡಿ ಟಿಕೆಟ್ ಕೊಡಲಿಲ್ಲ. ಟಿಕೆಟ್ ಕೊಡಿಸಿದ್ದು ನಾನು. ಕುತ್ತಿಗೆ ಕುಯ್ದು ಹೋದವನು ನೀನು ಎಂದು ತಿರುಗೇಟು ನೀಡಿದ್ದಾರೆ.
ನಾರಾಯಣಗೌಡನಿಂದ ನಾನು ಪಾಠ ಕಲಿಯುವ ಅಗತ್ಯವಿಲ್ಲ. ಈ ಚುನಾವಣೆಯಲ್ಲಿ ಕೆ.ಆರ್.ಪೇಟೆಯ ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.