ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸುತ್ತಿರುವ ಘಟನೆ ಹೆಚ್ಚುತ್ತಿದ್ದು, ಇದೀಗ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ.
ಈ ಬಗ್ಗೆ ಸ್ವತಃ ಸಚಿವ ನಿರಾಣಿ ಮಾಹಿತಿ ನೀಡಿದ್ದು, ಯಾರೋ ಕಿಡಿಗೇಡಿಗಳು ನನ್ನ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಯಾರೂ ಕೂಡ ಇಂತಹ ಸಂದೇಶವನ್ನು ನಂಬಬೇಡಿ. ಇದೆಲ್ಲವೂ ವಂಚಿಸಲು ಮಾಡಿರುವುದು ಎಂದು ಹೇಳಿದ್ದಾರೆ.
BIG NEWS: ರಾಜಕೀಯ ದುರುದ್ದೇಶದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ
ಈ ಬಗ್ಗೆ ನಾನು ಸೈಬರ್ ಕ್ರೈಂ ಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದಾರೆ.