BIG NEWS: ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ; ಖುದ್ದು ಮನವೊಲಿಕೆಗೆ ಮುಂದಾದ ಮಾಜಿ ಸಿಎಂ ಯಡಿಯೂರಪ್ಪ

ಯಾದಗಿರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳು ಭುಗಿಲೆದ್ದಿದ್ದು, ಪಕ್ಷ ಬಿಡಲು ಮುಂದಾದ ಮುಖಂದರ ಜೊತೆ ಖುದ್ದು ಮಾಜಿ ಸಿಎಂ ಬಿಎಸ್.ಯಡಿಯೂರಪ್ಪನವರೇ ಮಾತುಕತೆ ನಡೆಸಲು ಮುಂದಾಗಿದ್ದಾರೆ. ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಗೆ ಮುದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಬಿಜೆಪಿ ಈಗ ಬಿ.ಎಸ್.ಯಡಿಯೂರಪ್ಪ ಮೂಲಕ ಮನವೊಲಿಕೆಗೆ ಮುಂದಾಗಿದೆ.

ಸಚಿವ.ವಿ.ಸೋಮಣ್ಣ ಹಾಗೂ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಯಾದಗಿರಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಯಡಿಯೂರಪ್ಪ, ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆ ಎಂಬುದರಲ್ಲಿ ಯಾವುದೇ ಹುರುಳಿಲ್ಲ. ಬೆಂಗಳೂರಿಗೆ ಹೋದ ಬಳಿಕ ಎಲ್ಲರನ್ನೂ ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಎಲ್ಲರೂ ನಮ್ಮ ಜೊತೆಯೇ ಇದ್ದಾರೆ. ಸಚಿವ ಸೋಮಣ್ಣ ಸೇರಿದಂತೆ ಯಾರೂ ಕೂಡ ಬಿಜೆಪಿ ಬಿಡುವುದಿಲ್ಲ. ಯಾರಿಗೂ ಯಾವುದೇ ಅಸಮಾಧಾನಗಳೂ ಇಲ್ಲ. ನೂರಕ್ಕೆ ನೂರರಷ್ಟು ವಿಶ್ವಾಸದಿಂದ ಕೆಲಸ ಮಾಡಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read