ಬಳ್ಳಾರಿ: ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ವಿರುದ್ಧ ಜಮೀನು ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಚಾರ್ಜ್ ಶೀಟ್ ನ್ನು ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಬಿಡುಗಡೆ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿ.ಎಸ್.ಉಗ್ರಪ್ಪ, ಶ್ರೀರಾಮುಲು ವಿರುದ್ಧ 6000 ಪುಟಗಳ ದೋಷಾರೋಪ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಶ್ರೀರಾಮುಲು ವಿರುದ್ಧ ಕಳೆದ ಮಾರ್ಚ್ ತಿಂಗಳಿನಲ್ಲಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಜಮೀನು ಕಬಳಿಕೆ ಪ್ರಕರಣದಲ್ಲಿ A6 ಆರೋಪಿ ಶ್ರೀರಾಮುಲು. ಕಾಂಗ್ರೆಸ್ ಬಗ್ಗೆ ಮಾತನಾಡುವ ಶ್ರೀರಾಮುಲು ಸತ್ಯ ಹರಿಶ್ಚಂದ್ರರಲ್ಲ. ವಾಲ್ಮೀಕಿ ಸಮಾಜಕ್ಕೆ ಶ್ರೀರಾಮುಲು ಕೆಟ್ಟ ಹೆಸರು ತಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾನೂನು ಮೇಲೆ ಗೌರವ ಇದ್ದರೆ ಶ್ರೀರಾಮುಲು ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಶ್ರೀರಾಮುಲು ವಿರುದ್ಧ ರಾಜ್ಯಪಾಲರಿಗೂ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ.