ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಸಚಿವ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಶ್ರೀರಾಮುಲು ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಸಚಿವ ಶ್ರೀರಾಮುಲು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ 5 ವರ್ಷಗಳ ಕಾಲ ಶ್ರೀರಾಮುಲು ವಿರುದ್ಧ ತಿಪ್ಪೇಸ್ವಾಮಿ ಸಮರ ಸಾರಿದ್ದರು. ಟಿಕೆಟ್ ಕೈತಪ್ಪಿದ್ದಕ್ಕೆ 2018ರಲ್ಲಿ ಕಾಂಗ್ರೆಸ್ ಸೇರಿದ್ದರು. ಈಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಶ್ರೀರಾಮುಲು ಕ್ಷೇತ್ರವನ್ನೇ ವ್ಯಾಪಾರಕ್ಕಿಟ್ಟು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.