ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಆರಂಭಾವಾಗಿರುವ ನಡುವೆಯೇ ಡಿ.ಕೆ.ಶಿವಕುಮಾರ್ ಹಾಗೂ ಸೋಮಣ್ಣ ಇಬ್ಬರು ಮಾತನಾಡುತ್ತಿರುವ ಫೋಟೋ ವೈರಲ್ ಆಗಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಡಿ.ಕೆ.ಶಿವಕುಮಾರ್ ಜೊತೆ ಸಚಿವ ಸೋಮಣ್ಣ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಫೋಟೋ ವೈರಲ್ ಆಗಿದ್ದು, ಪ್ರವಾಸದ ಸಂದರ್ಭದಲ್ಲೇ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆದಿದೆಯಾ ಎಂಬ ಪ್ರಶ್ನೆ ಮೂಡಿದೆ.
ಡಿಕೆಶಿ, ಸೋಮಣ್ಣ ಫೋಟೋ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಸಚಿವ ಸೋಮಣ್ಣ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಲಿದ್ದು, ಸ್ಪಷ್ಟನೆ ನೀಡಲಿದ್ದಾರೆ. ಸೋಮಣ್ಣ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ.