ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಹೊತ್ತಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಮಂತ್ರಿ ಸ್ಥಾನಕ್ಕಾಗಿ ಶಾಸಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಸಿಡಿ ಕೇಸ್ ಸಂಕಷ್ಟಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಈ ಬಾರಿ ಮತ್ತೆ ಸಂಪುಟ ಸೇರಲು ಕಸರತ್ತು ನಡೆಸಿದ್ದು, ಇದೀಗ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ, ತಮ್ಮ ರಾಜಕೀಯ ಗುರು ದೇವೇಂದ್ರ ಫಡ್ನವಿಸ್ ಮೂಲಕ ವರಿಷ್ಠರ ಮೇಲೆ ಒತ್ತಡ ತಂತ್ರ ಹೆಣೆಯಲು ಮುಂದಾಗಿದ್ದಾರೆ.
ಈಗಾಗಲೇ ದೇವೇಂದ್ರ ಫಡ್ನವಿಸ್ ಗೋವಾ ಚುನವಣಾ ಪ್ರಚಾರದಲ್ಲಿ ನಿರತರಾಗಿರುವುದರಿಂದ ನಿನ್ನೆಯೇ ಗೋವಾಗೆ ತೆರಳಿರುವ ರಮೇಶ್ ಜಾರಕಿಹೊಳಿ, ಇಂದು ಮಧ್ಯಾಹ್ನ ಖಾಸಗಿ ಹೋಟೆಲ್ ನಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಫಡ್ನವಿಸ್ ಮೂಲಕ ಹೈಕಮಾಂಡ್ ಗೆ ನೇರವಾಗಿ ಒತ್ತಡ ಹೇರುವ ಮೂಲಕ ಸಚಿವ ಸ್ಥಾನ ಪಡೆಯಲು ಯೋಜನೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ.
ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಘೋಷಣೆ; ಸಮಾಜವಾದಿ ಪಕ್ಷದವರದ್ದೇ ಮೇಲುಗೈ
ಇನ್ನೊಂದೆಡೆ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಯತ್ನಾಳ್, ಅರವಿಂದ್ ಬೆಲ್ಲದ್, ಪಿ.ರಾಜೀವ್, ಎಸ್.ಎ.ರಾಮದಾಸ್, ರೂಪಾಲಿ ನಾಯ್ಕ್, ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವರು ಈ ಬಾರಿ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕ್ಯಾಬಿನೆಟ್ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನಿಡಿದರೆ ಯಾರಿಗೆಲ್ಲ ಮಂತ್ರಿ ಸ್ಥಾನ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.