ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅಕ್ಟೋಬರ್ 8 ರಂದು ದೆಹಲಿ ಪ್ರವಾಸ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನಕ್ಕಾಗಿ ಮತ್ತೆ ಪೈಪೋಟಿ ಆರಂಭವಾಗಿದೆ.
ಈಗಾಗಲೇ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿರುವ ಸಿ.ಪಿ. ಯೋಗೇಶ್ವರ್, ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್, ಎಂ.ಪಿ. ಕುಮಾರಸ್ವಾಮಿ ಈ ಬಾರಿಯ ಸಂಪುಟ ವಿಸ್ತರಣೆ ಸಂದರ್ಭದಲ್ಲಾದರೂ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ, ದೆಹಲಿ ಭೇಟಿ ವೇಳೆ ಹೈಕಮಾಂಡ್ ಮುಂದೆ ಪ್ರಸ್ತಾಪ ಇಡುವ ಬಗ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಈ ನಡುವೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ಎಸ್.ಎ. ರಾಮದಾಸ್, ಸಚಿವ ಸ್ಥಾನ ಸಿಗಲಿಲ್ಲ ಎಂದು ನಾನು ಎಲ್ಲೂ ಓಡಿ ಹೋಗಲ್ಲ, ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗದಿದ್ದರೂ ವಿಚಲಿತನಾಗಲ್ಲ ಎಂದು ಹೇಳಿದ್ದಾರೆ.
ಮುನ್ಸಿಪಲ್ ಚುನಾವಣೆಯಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್
ಮಂತ್ರಿಯಾಗದಿದ್ದರೂ ರಾಮದಾಸ್ ಸಮಾಜಕ್ಕೆ ಮಾದರಿ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನನಗಷ್ಟು ಸಾಕು. ನಾನು ಸಚಿವನಾಗಲಿ ಬಿಡಲಿ, ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸಗಳನ್ನು, ಜನಪರ ಕಾರ್ಯಗಳನ್ನು ಮಾಡುತ್ತಿರುತ್ತೇನೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ ಎಂದು ಟಾಂಗ್ ನೀಡಿದ್ದಾರೆ.
BIG NEWS: ಸಿಎಂ ಆಗುವುದು ಇರಲಿ; ಮೊದಲು ಚುನಾವಣೆ ಗೆಲ್ಲಲಿ; ಸಿದ್ದರಾಮಯ್ಯಗೆ ಸವಾಲು ಹಾಕಿದ ಈಶ್ವರಪ್ಪ
ಅಕ್ಟೋಬರ್ 8 ರಿಂದ ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಸಿಎಂ, ಖಾಲಿ ಇರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ನಿಟ್ಟಿನಲ್ಲಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಮಂತ್ರಿ ಸ್ಥಾನ ಕೈತಪ್ಪಿದ್ದ ಶಾಸಕರಲ್ಲಿ ಮತ್ತೆ ಚಿಗುರೊಡೆದಿದೆ.