alex Certify BIG NEWS: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್ ಶಾಕ್; ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್ ಶಾಕ್; ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ….!

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಶಾಕ್ ನೀಡಿದಂತಿದೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಬಹುತೇಕ ಅನುಮಾನ ಎಂಬ ಮಾತು ಕೇಳಿಬರುತ್ತಿವೆ.

ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಬಿಜೆಪಿ ವರಿಷ್ಠರು ಸದ್ಯಕ್ಕೆ ಗಮನ ಹರಿಸುತ್ತಿಲ್ಲ. ಅಲ್ಲದೇ ಈ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರವಾಸ ಕೂಡ ಆರಂಭವಾಗಿದೆ. ಹಾಗಾಗಿ ಸಂಪುಟ ವಿಸ್ತರಣೆ ಚರ್ಚೆ ಅನುಮಾನ ಎನ್ನಲಾಗಿದೆ.

ಬಿ ಎಸ್ ವೈ ಸರ್ಕಾರದಲ್ಲಿದ್ದು, ಬೊಮ್ಮಾಯಿ ಸರ್ಕಾರದಲ್ಲಿ ಕೈಬಿಡಲಾಗಿದ್ದ ಮಾಜಿ ಸಚಿವರು ಸಂಪುಟ ಸೇರಲು ತೀವ್ರ ಪ್ರಯತ್ನ ನಡೆಸಿದ್ದು, ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆಯಾಗಲಿದೆ ಎಂದು ನಿರೀಕ್ಷೆಯಲ್ಲಿದ್ದರು. ಆದರೆ ಸದ್ಯಕ್ಕೆ ಅಂತಹ ಯಾವ ಲಕ್ಷಗಳು ಕಾಣದ ಹಿನ್ನೆಲೆಯಲ್ಲಿ ನಿರಾಶರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...