BIG NEWS: ಸಚಿವ ಸ್ಥಾನದ ಆಸೆಯನ್ನೇ ಬಿಟ್ಟಿದ್ದೇನೆ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಸಚಿವ ಸ್ಥಾನದ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಚಿವ ಸ್ಥಾನ ಯಾವಾಗ ಕೊಡುತ್ತಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಮಂತ್ರಿ ಆದರೆ ಆಯ್ತು ಇಲ್ಲವಾದ್ರೆ ಇಲ್ಲ. ಎಲ್ಲಾ ಶಾಸಕರೂ ಸಚಿವರಾಗಬೇಕೆಂದೇನೂ ಇಲ್ಲವಲ್ಲ… ಸರ್ಕಾರವಂತು ಚೆನ್ನಾಗಿಯೇ ನಡೆಯುತ್ತಿದೆ. ನನ್ನನ್ನು ಸಚಿವನನ್ನಾಗಿ ಮಾಡಬೇಕು ಎಂದು ಅಂದು ಸಿಎಂ ಬಳಿ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಈ ಬಗ್ಗೆ ಎಲ್ಲಾ ಪ್ರಯತ್ನ ಮಾಡುವುದಾಗಿಯೂ ಸಿಎಂ ಬೊಮ್ಮಾಯಿ ಹೇಳಿದ್ದರು. ಆದರೆ ಈಗ ನಾನು ಸಚಿವ ಸ್ಥಾನದ ಆಸೆಯನ್ನೇ ಬಿಟ್ಟಿದ್ದೇನೆ ಎಂದರು.

ಆಡಳಿತ ನಡೆಸುವುದು, ಸಚಿವರನ್ನಾಗಿ ಮಾಡುವುದು ಅಷ್ಟು ಸುಲಭದ ಮಾತಲ್ಲ. ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ಮತ್ತೊಂದು ಸಮಸ್ಯೆ ತರಲು ನಾನು ಸಿದ್ಧನಿಲ್ಲ. ಅವರಾಗಿಯೇ ಸಚಿವನನ್ನಾಗಿ ಮಾಡಿದರೆ ಸಂತೋಷ. ಇಲ್ಲವಾದರೆ ಇಲ್ಲ. ಮಂತ್ರಿಯಾಗಬೇಕು ಎಂಬ ಕಾರಣಕ್ಕೆ ಸರ್ಕಾರದಲ್ಲಿ ನಾನೇ ಒಂದು ಸಮಸ್ಯೆಯಾಗಲು ಇಷ್ಟಪಡಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read