ಬೆಂಗಳೂರು; ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪದಗ್ರಹಣದ ಬೆನ್ನಲ್ಲೇ ಮಂತ್ರಿ ಸ್ಥಾನಕ್ಕಾಗಿ ಫೈಟ್ ಆರಂಭವಾಗಿದ್ದು, ಬಿ.ಎಸ್.ವೈ. ಸಂಪುಟದಲ್ಲಿದ್ದ ಘಟಾನುಘಟಿ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ.
ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಚಿಂತನೆ ನಡೆಸಲಾಗಿದ್ದು, ಹಲವು ಹಿರಿಯ ನಾಯಕರಿಗೆ ಮಂತ್ರಿಗಿರಿ ಕೈತಪ್ಪಲಿದೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಪ್ರಭು ಚೌವ್ಹಾಣ್, ಕೋಟಾ ಶ್ರೀನಿವಾಸ್ ಪೂಜಾರಿ, ಆನಂದ್ ಸಿಂಗ್, ಆರ್. ಶಂಕರ್, ಶ್ರೀಮಂತ್ ಪಾಟೀಲ್, ಕೆ. ಗೋಪಾಲಯ್ಯ, ಶಿವರಾಮ್ ಹೆಬ್ಬಾರ್ ಸಚಿವ ಸ್ಥಾನದಲ್ಲಿ ಮುಂದುವರೆಯುವುದು ಅನುಮಾನ ಎನ್ನಲಾಗಿದೆ.
ʼಶೃಂಗಾರʼ ಮತ್ತು ʼಅಶ್ಲೀಲತೆʼ ನಡುವೆ ಇರುವ ವ್ಯತ್ಯಾಸವೇನು…? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ನೂತನ ಸಂಪುಟದಲ್ಲಿ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರಾಮದಾಸ್, ರಾಜುಗೌಡ, ಮುನಿರತ್ನ, ಜಿ.ಹೆಚ್. ತಿಪ್ಪಾರೆಡ್ಡಿ, ದತ್ತಾತ್ರೆಯ ಪಾಟೀಲ್, ಸುನೀಲ್ ಕುಮಾರ್, ಪೂರ್ಣಿಮಾ ಶ್ರೀನಿವಾಸ್ ಹಾಗೂ ರೂಪಾಲಿ ನಾಯ್ಕ್ ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಒಟ್ಟಾರೆ ನೂತನ ಸಂಪುಟದ ಬಗ್ಗೆ 2-3 ದಿನಗಳಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಹೇಳಲಾಗುತ್ತಿದೆ.