ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಖಾಲಿ ಇರುವ ಸಚಿವ ಸಂಪುಟ ಸ್ಥಾನಗಳ ಭರ್ತಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ತಿಂಗಳಾಂತ್ಯದೊಳಗೆ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಲಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಸಂಪುಟದಲ್ಲಿ 5 ಸ್ಥಾನಗಳು ಖಾಲಿ ಇದ್ದು, ನಾಲ್ಕು ಸ್ಥಾನಗಳ ಭರ್ತಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಬಿಜೆಪಿಯ ಹಿರಿಯ ನಾಯಕರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ.
2+2 ಫಾರ್ಮುಲಾದಲ್ಲಿ ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಲೆಕ್ಕಾಚಾರ ಹಾಕಿದ್ದು, ಆಗಸ್ಟ್ ಅಂತ್ಯದೊಳಗೆ ಸಂಪುಟ ವಿಸ್ತರಣೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದುಬಂದಿದೆ.