alex Certify BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೇ ಅಧಿವೇಶನಕ್ಕೆ ಹೋಗಿಲ್ಲ; ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೇ ಅಧಿವೇಶನಕ್ಕೆ ಹೋಗಿಲ್ಲ; ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ಗೈರಾಗಿರುವುದಕ್ಕೆ ಕಾರಣ ತಮಗೆ ಸಚಿವ ಸ್ಥಾನ ಸಿಗದಿರುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇರವಾಗಿ ಬಿಜೆಪಿ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಅಸಮಾಧಾನವಿದೆ. ಹಾಗಾಗಿ ನಾನು ಸದನಕ್ಕೆ ಹೋಗಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.

ಸಂಪುಟಕ್ಕೆ ಸೇರಿಸಿಕೊಳ್ಳುವುದು ಕೇಂದ್ರ ನಾಯಕರಿಗೆ ಬಿಟ್ಟದ್ದು. ನನಗೆ ಕ್ಲೀನ್ ಚಿಟ್ ಸಿಕ್ಕಿದರೂ ಸಚಿವ ಸ್ಥಾನ ನೀಡಲು ವಿಳಂಬ ಮಾಡುತ್ತಿದ್ದಾರೆ. ಹಾಗಾಗಿ ನನಗೆ ಬೇಸರವಾಗಿದೆ. ಇದನ್ನು ಮುಚ್ಚುಮರೆಯಿಲ್ಲದೇ ಹೇಳುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...