
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಶಾಸಕರ ಶಿಫಾರಸು ಪತ್ರದ ಜೊತೆ 30 ಲಕ್ಷ ಹಣ ಕೇಳುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಇದೀಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಧ್ವನಿಗೂಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಯಾವುದೋ ಸಣ್ಣ ಹುದ್ದೆಗೆ 30 ಲಕ್ಷ ಕೇಳಿದ್ದಾರೆ. ಅಲ್ಲಿ ಕೋಟ್ಯಂತರ ರೂಪಾಯಿ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ಬಗ್ಗೆಯೂ ಟೀಕಿಸಿದ ಬೊಮ್ಮಾಯಿ, ರಾಜ್ಯಪಾಲರ ಭಾಷಣ ಸಪ್ಪೆ ಭಾಷಣ. ಭರವಸೆ ಮೂಡಿಸುವ ಯಾವುದೇ ಭಾಷಣ ಅಲ್ಲ. ಸುಳ್ಳಿನ ಕಂತೆ ಅಂತ ಸಾಬೀತಾಗಿದೆ ಎಂದು ಹೇಳಿದ್ದಾರೆ.