ಉಡುಪಿ; ಹಿಂದೂ ಪದಕ್ಕೆ ಅಸಭ್ಯ ಅರ್ಥವಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಜನರು ಒಕ್ಕೋರಲಿನಿಂದ ಖಂಡಿಸಬೇಕು ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸತೀಶ್ ಜಾರಕಿಹೊಳಿಗೆ ಯಾವುದೇ ಆಳವಾದ ಜ್ಞಾನವಿಲ್ಲ. ಅವರು ಅರೆಜ್ಞಾನ ಹೊಂದಿರುವ ವ್ಯಕ್ತಿ. ಗೌರವದಿಂದ ಅವರು ನಡೆದುಕೊಳ್ಳಬೇಕು. ಅವರ ಹೇಳಿಕೆ ಪೂರ್ವಾಗ್ರಹ ಹಾಗೂ ಯೋಜನಾಬದ್ಧವಾದ ಹೇಳಿಕೆ. ಸತೇಶ್ ಹೇಳಿಕೆಯನ್ನು ಎಲ್ಲರೂ ಖಂಡಿಸಬೇಕು ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ಭಾರತೀಯರ ಭಾವನೆಗೆ ಧಕ್ಕೆಯಾಗಿದೆ. ಈ ಬಗ್ಗೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮೌನವಾಗಿರುವುದೇಕೆ? ಕಾಂಗ್ರೆಸ್ ನಾಯಕರ ಮೌನ ಸತೀಶ್ ಹೇಳಿಕೆಗೆ ಸಮ್ಮತಿಯೇ? ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ರಾಜ್ಯದಲ್ಲಿ ಅಲ್ಪ ಸ್ವಲ್ಪ ಕಾಂಗ್ರೆಸ್ ಉಳಿದಿದೆ. ಇನ್ನು ಕೆಲವೇ ದಿನಗಳಲ್ಲಿ ಅದೂ ಕೂಡ ಇಲ್ಲವಾಗಲಿದೆ ಎಂದು ವಾಗ್ದಾಳಿ ನಡೆಸಿದರು.