alex Certify BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ BJP ಕಾರ್ಯಕರ್ತರು; ಪ್ರತಿಕೃತಿ ದಹಿಸಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ BJP ಕಾರ್ಯಕರ್ತರು; ಪ್ರತಿಕೃತಿ ದಹಿಸಿ ಆಕ್ರೋಶ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಸತೀಶ್ ಜಾರಕಿಹೊಳಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂಬ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಡಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿಯೂ ಬಿಜೆಪಿ ಕಾರ್ಯಕರ್ತರು ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮೈಸೂರು, ಚಾಮರಾಜನಗರ, ತುಮಕೂರು, ಶಿವಮೊಗ್ಗ, ರಾಯಚೂರು ಜಿಲ್ಲೆಯಲ್ಲಿಯೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದು, ಸತೀಶ್ ಜಾರಕಿಹೊಳಿ ತಕ್ಷಣ ಕ್ಷಮೆಯಾಚಿಸಬೇಕು ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...